ಕಾರ್ಕಳ: ಜನವರಿ 8ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಕಾರ್ಕಳ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಹಯೋಗದಲ್ಲಿ ಜನವರಿ 8ರಂದು 19ನೇ ವರ್ಷದ ಲವಕುಶ ಜೋಡುಕೆರೆ ಕಂಬಳ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಈ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸುಮಾರು 25 ಲಕ್ಷ ರೂ ಅನುದಾನದಿಂದ ನೂತನ ಸಭಾ ವೇದಿಕೆ ನಿರ್ಮಾಣಗೊಳ್ಳುತ್ತಿದ್ದು ಇದರ ಉದ್ಘಾಟನಾ ಸಮಾರಂಭವು ಕೂಡ ಅಂದು ಸಂಜೆ ನಡೆಯಲಿದೆ. ಈಗಾಗಲೇ ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಆರರಿಂದ ಏಳು ಜೋಡಿಕರೆ ಕಂಬಳ ಕೂಟಗಳು ಜರುಗಿದ್ದು ಮಿಯ್ಯಾರಿನಲ್ಲಿ ಕೂಡ ಸುಮಾರು 250 ಜೊತೆ ಗಿಂತಲೂ ಅಧಿಕ ಸಂಖ್ಯೆಯಲ್ಲಿ ಕೋಣಗಳು ವಿವಿಧ ವಿಭಾಗಗಳಿಂದ ಭಾಗವಹಿಸುವ ನಿರೀಕ್ಷೆ ಇದೆ ಜಿಲ್ಲಾ ಕಂಬಳ ಸಮಿತಿಯ ಮಾರ್ಗದರ್ಶನದೊಂದಿಗೆ ಕಂಬಳದ ಹಿರಿಯ ಅನುಭವಿಗಳಾದ ಭಾಸ್ಕರ್ ಎಸ್ ಕೋಟ್ಯಾನ್, ಗುಣಪಾಲ ಕಡಂಬ ಕಾರ್ಯಾಧ್ಯಕ್ಷ ಜೀವನದಾಸ್ ಅಡ್ಯಂತಾಯ, ಮೊದಲಾದವರ ಸಲಹೆ ಸೂಚನೆಗಳೊಂದಿಗೆ ಕಂಬಳವನ್ನು ಶಿಸ್ತುಬದ್ಧವಾಗಿ ಆಯೋಜಿಸಲು ಸಿದ್ಧತೆ ಮಾಡಲಾಗಿದೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನೂತನ ಸಭಾ ವೇದಿಕೆಯ ಉದ್ಘಾಟನೆಯನ್ನು ಪ್ರವಾಸೋದ್ಯಮ ಹಾಗೂ ಜೀವವೈವಿಧ್ಯ ಮತ್ತು ಪರಿಸರ ಇಲಾಖೆಯ ಸಚಿವರಾದ ಆನಂದ್ ಸಿಂಗ್ ನೆರವೇರಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೀನುಗಾರಿಕೆ ಇಲಾಖೆ ಹಾಗೂ ಬಂದರುಗಳ ಮತ್ತು ಒಳನಾಡಿನ ಸಾರಿಗೆ ಇಲಾಖೆ ಸಚಿವರಾದ ಎಸ್ ಅಂಗಾರ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಾಜಿ ಸಿಎಂ ವಿರಪ್ಪ ಮೊಯ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದು ಸಚಿವ ಸುನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ