ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಉದ್ಯಮಿ ಡಿ ಆರ್ ರಾಜು ಅವರನ್ನು ಹೈಕಮಾಂಡ್ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಿದೆ.
ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿರುವ ಅವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಚಿಕ್ಕಮಗಳೂರು ಕ್ಷೇತ್ರದಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಗೂ ಮೂಡುಬಿದಿರೆ ಕ್ಷೇತ್ರದಿಂದ ಒಂದು ಬಾರಿ ಎಂಎಲ್ಎ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದಿಂದ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಜೆ ಅಭ್ಯರ್ಥಿಯನ್ನು ಘೋಷಿಸುವ ಮುನ್ನವೇ ಟಿಕೆಟ್ ಆಕಾಂಕ್ಷಿ ಡಿ ಆರ್ ರಾಜು ಅವರನ್ನು ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದು ಕಾರ್ಕಳ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.