ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭರ್ಜರಿ ಮತಬೇಟೆ ನಡೆಸಲು ರಣತಂತ್ರ ರೂಪಿಸುತ್ತಿದ್ದ ಉಡುಪಿ ಶಾಸಕ ರಘುಪತಿ ಭಟ್ ಭಾವುಕರಾಗಿದ್ದಾರೆ.
ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ ರಘುಪತಿ ಭಟ್ ನಿವಾಸಕ್ಕೆ ಅಭಿಮಾನಿಗಳು ದೌಡಾಯಿಸಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಭಾವುಕರಾಗಿದ್ದ ಭಟ್ ಅಭಿಮಾನಿಗಳನ್ನು ಕಂಡು ಕಣ್ಣೀರಿಟ್ಟಿದ್ದಾರೆ. ನಾನು ಶಾಕ್ನಲ್ಲಿದ್ದೇನೆ. ನಾನು ಏನು ಹೇಳುವ ಸ್ಥಿತಿಯಲ್ಲಿಲ್ಲ ಎಂದು ಅಭಿಮಾನಿಗಳಲ್ಲಿ ಭಾವುಕರಾಗಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.