ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜೀನಾಮೆ ಪರ್ವ ಜೋರಾಗಿದ್ದು, ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಪುಲಕೇಶಿನಗರ ಕ್ಷೇತ್ರದಿಂದ ಟಿಕೆಟ್ ಸಿಗಲ್ಲ ಎಂಬ ಅನುಮಾನದ ಹಿನ್ನೆಲೆ ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ. ಶಿರಸಿಯಲ್ಲಿ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಬೆಂಗಳೂರಿನಿಂದ ಶಿರಸಿಗೆ ಅವರು ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಕೂಡ ಪುಲಕೇಶಿನಗರದ ಟಿಕೆಟ್ ಘೋಷಣೆಯಾಗದ ಹಿನ್ನೆಲೆ ನನಗೆ ಟಿಕೆಟ್ ಸಿಗಲ್ಲ ಎಂದು ಬೇಸತ್ತ ಅಖಂಡ ಶ್ರೀನಿವಾಸ ಮೂರ್ತಿ’ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.ಕರ್ನಾಟಕ ವಿಧಾನಸಭೆ ಚುನಾವಣೆಗೆ ಪುಲಕೇಶಿ ಕ್ಷೇತ್ರದಲ್ಲಿ ತಮಗೆ ಟಿಕೆಟ್ ಕೊಡುವಂತೆ ಅಖಂಡ ಶ್ರೀನಿವಾಸಮೂರ್ತಿ ಪಟ್ಟು ಹಿಡಿದಿದ್ದರು.