ಬೆಂಗಳೂರು : ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಕ್ಯಾಮರಾಗಳ ಮಾಹಿತಿ ಆಧರಿಸಿ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಾರಿಗೆ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ವಾಹನಗಳ ವಿರುದ್ಧ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಇತ್ತೀಚೆಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಸ್ತಾವನೆ ಬಗ್ಗೆ ಚರ್ಚಿಸಿ ಶೇ.50ರಷ್ಟುರಿಯಾಯಿತಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟುವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.