Share this news

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಸ್ಪೀಕರ್ ಅವರ ಒಪ್ಪಿಗೆ ಹಾಗೂ ಅಕ್ಟೋಕೇಟ್ ಜನರಲ್ ಅವರಿಂದ ಮಾಹಿತಿ ಪಡೆಯದೇ ಅಂದಿನ ಸಿಎಂ ಮೌಕಿಕವಾಗಿ ಡಿಕೆಶಿ ಅವರ ವಿರುದ್ಧ ಆದೇಶ ನೀಡಿದ್ದರು. ಈ ಬೆಳವಣಿಗೆಯನ್ನು ನೋಡಿದರೆ ಇದು ರಾಜಕೀಯ ಪ್ರೇರಿತ ಎನ್ನುವುದು ಸ್ಪಷ್ಟವಾಗಿದೆ ಎಂದರು.

Leave a Reply

Your email address will not be published. Required fields are marked *