ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.
ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಆದರೆ ಹೆಲಿಕಾಪ್ಟರ್ ಕೊಂಚ ದೂರ ಸಾಗಿ ತುರ್ತು ಭೂಸ್ಪರ್ಶವಾಗಿದೆ. ಏಕೆಂದರೆ ಹಾರಾಟ ವೇಳೆ ಹೆಲಿಕಾಪ್ಟರ್ ಮುಂಭಾಗದ ವಿಂಡೋ ಗಾಜು ಪುಡಿಪುಡಿಯಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ಹಿನ್ನೆಲೆ ಮುಳುಬಾಗಿಲಿಗೆ ತೆರಳಬೇಕಿತ್ತು. ಹೀಗಾಗಿ ಬೆಂಗಳೂರಿನ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಸುರಕ್ಷಿತರಾಗಿದ್ದಾರೆ ಎಂದು ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ .