ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಸಚಿವ ಆರ್ ಬಿ ತಿಮ್ಮಾಪುರಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಬಾಗಲಕೋಟೆ ಜಿಲ್ಲಾ ಮಾದಿಗ ಸಮುದಾಯ ಆಗ್ರಹಿಸಿದೆ.
ಕೂಡಲಸಂಗಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಜಿಲ್ಲಾ ಮಾದಿಗ ಸಮುದಾಯದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗುತ್ತದೆ.ಅಗತ್ಯ ಬಿದ್ದರೆ ಹೈಕಮಾಂಡ್ ಭೇಟಿ ಮಾಡಲು ಮುಖಂಡರು ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಸಮುದಾಯದ ಮುಖಂಡ ಬೀರಪ್ಪ ಮ್ಯಾಗೇರಿ ಈ ಕುರಿತಂತೆ ಮಾಹಿತಿ ನೀಡಿದರು. ಕೂಡಲಸಂಗಮದಲ್ಲಿ ಇಂದು ಬಸವ ಧರ್ಮಪೀಠದಿಂದ ಶರಣ ಮೇಳ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಯಾದಗಿರಿ ಜಿಲ್ಲೆ ತಿಂಥಣಿ ಗ್ರಾಮದಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ.
ಮಧ್ಯಾಹ್ನ 1:30ಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಹೊರಟು ಮಧ್ಯಾಹ್ನ 3.30ಕ್ಕೆ ಆಗಮಿಸಲಿದ್ದು, ಬಸವ ಧರ್ಮ ಪೀಠದ ಶರಣ ಮೇಳದಲ್ಲಿ ಭಾಗಿಯಾಗಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ನಲ್ಲಿ ಜಿಂದಾಲ್ ಏರ್ ಸ್ಟ್ರಿಪ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ