ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಒತ್ತಾಯಿಸಿ ನಾಳೆ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಳೆಯ ಬೆಂಗಳೂರು ಬಂದ್ ಗೆ ರೈತ ಸಂಘಟನೆಗಳು ಸೇರಿದಂತೆ ಸುಮಾರು 150 ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದ್ದರಿಂದ ಸಾರ್ವಜನಿಕ ಸಾರಿಗೆ,ಆಟೋ,ಹೋಟೆಲ್ ಸೇರಿದಂತೆ ಪ್ರಮುಖ ಸೇವೆಗಳು ಬಂದ್ ಆಗಲಿದ್ದು, ಬೆಂಗಳೂರು ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ.
ಬೆಂಗಳೂರು ಬಂದ್ ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಬೆಂಬಲ ನೀಡಿದೆ. ಕೆ ಎಸ್ ಆರ್ ಟಿ ಸಿ ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ ಕೂಡ ಬೆಂಬಲ ಸೂಚಿಸಿದೆ,ಮಾತ್ರವಲ್ಲದೆರ ಬೆಂಗಳೂರು ಬಂದ್ ಗೆ ಕರ್ನಾಟಕ ಚಾಲಕರ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕೂಡ ಬೆಂಬಲ ನೀಡಿದೆ. ಇದಲ್ಲದೇ ರೈತಪರ ಸಂಘಟನೆಗಳು, ಕನ್ನಡಪರ ಒಕ್ಕೂಟಗಳು ಬೆಂಬಲ ನೀಡಿವೆ. ನಾಳೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ತುರ್ತು ಸೇವೆಗಳಾದ ಹಾಲು,ಪೇಪರ್, ಮೆಡಿಕಲ್, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ