Share this news

ಹೆಬ್ರಿ: ರಾಜ್ಯದಲ್ಲಿ ತೀವ್ರ ಜಲಕ್ಷಾಮದ ನಡುವೆಯೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಕಾರ್ಕಳ ಜೆಡಿಎಸ್ ಘಟಕದ ವತಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ಹೆಬ್ರಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ತಹಶಿಲ್ದಾರ್ ಪುರಂದರ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಶ್ರೀಕಾಂತ್ ಪೂಜಾರಿ ಕುಚ್ಚೂರು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ಕಾರ್ಕಳ ತಾಲೂಕು ಘಟಕದ ಕಾರ್ಯದರ್ಶಿ ಸುರೇಶ್ ದೇವಾಡಿಗ ಬಜಗೋಳಿ, ಸಂಘಟನಾ ಕಾರ್ಯದರ್ಶಿ ಸಯ್ಯದ್ ಹರ್ಷದ್, ಕೀರ್ತಿರಾಜ್, ಅನೂಪ್ ಮುಂತಾದರು ಉಪಸ್ಥಿತರಿದ್ದರು

 

 

 

 

 

Leave a Reply

Your email address will not be published. Required fields are marked *