Share this news

ತಿರುಪತಿ: ಪ್ರಸಿದ್ಧ ತಿರುಮಲ ದೇವಸ್ಥಾನದ ಬಳಿ ಆರು ವರ್ಷದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಐದು ಸ್ಥಳಗಳಲ್ಲಿ ಚಿರತೆ ಚಲನವಲನ ಕಂಡುಬಂದಿತ್ತು, ಅರಣ್ಯಾಧಿಕಾರಿಗಳು ಬೋನು ಹಾಕಿ ಚಿರತೆಯನ್ನು ಹಿಡಿದಿದ್ದಾರೆ.

ಈ ಪ್ರದೇಶದಲ್ಲಿ ಸುಮಾರು ಹನ್ನೆರಡು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮಕ್ಕಳೊಂದಿಗೆ ಟ್ರೆಕ್ಕಿಂಗ್ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪೋಷಕರಿಗೆ ಸೂಚನೆ ನೀಡಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಂದಿಗೆ ಯಾತ್ರಾರ್ಥಿಗಳು ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರ ನಡುವೆ ಮಾತ್ರ ಚಾರಣ ಮಾಡಬಹುದು ಎಂದು  ಟಿಟಿಡಿ ತಿಳಿಸಿದೆ.

ಮತ್ತೊಂದು ಪ್ರಮುಖ ನಿರ್ಧಾರದಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ನಿರ್ಬಂಧಿಸಲಾಗಿದೆ. ಟಿಟಿಡಿ ಅಧ್ಯಕ್ಷ ಬಿ ಕರುಣಾಕರ ರೆಡ್ಡಿ ಮಾತನಾಡಿ ಪಾದಚಾರಿ ಮಾರ್ಗಗಳು ಮತ್ತು ಘಾಟ್ ರಸ್ತೆಗಳಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಂಜೆ ಉನ್ನತ ಮಟ್ಟದ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

ಲಕ್ಷಿತಾ ತನ್ನ ಪೋಷಕರೊಂದಿಗೆ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಿರುಪತಿಯ ಬೆಟ್ಟದ ದೇಗುಲಕ್ಕೆ ಹೋಗುವ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ದೇವಸ್ಥಾನದ ಬಳಿಯ ಪೊದೆ ಪ್ರದೇಶದಲ್ಲಿ ಆಕೆಯ ಶವ ಪತ್ತೆಯಾಗಿದೆ.

ಜೂನ್‌ನಲ್ಲಿ, ಮೂರು ವರ್ಷದ ಬಾಲಕ ಈ ಪ್ರದೇಶದಲ್ಲಿ ಚಿರತೆ ದಾಳಿಗೆ ಒಳಗಾಗಿದ್ದ, ಆದರೆ ಕ್ಷಣಾರ್ಧದಲ್ಲಿ ರಕ್ಷಿಸಲಾಯಿತು. ಸುಮಾರು 150 ಕ್ಯಾಮೆರಾಗಳನ್ನು ಬಳಸಿ ಅದನ್ನು ಪತ್ತೆಹಚ್ಚಿ, ಪ್ರಾಣಿಯನ್ನು ಬಲೆಗೆ ಬೀಳಿಸಿ ನಂತರ ಮತ್ತೊಂದು ಕಾಡಿಗೆ ಬಿಡಲಾಯಿತು.

Leave a Reply

Your email address will not be published. Required fields are marked *