ಮುಲ್ಕಿ: ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಆಂದೋಲನದ ಅಂಗವಾಗಿ ನೆಹರು ಯುವ ಕೇಂದ್ರ ಮಂಗಳೂರು, ಪಡು ಪಣಂಬೂರು ಗ್ರಾಮ ಪಂಚಾಯತ್,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ ತೋಕೂರು, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ತೋಕೂರು ದೇವಸ್ಥಾನದ ಸುತ್ತಮುತ್ತಲಿನ ಪರಿಸರದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಯುವಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿಗಾರ್, ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ ರಾವ್, ಪಡು ಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಹೇಮನಾಥ ಅಮೀನ್, ಪಡು ಪಣಂಬೂರು ಗ್ರಾಮ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧೀರ್ ಹಾಗೂ ಪಂಚಾಯತ್ ಸದಸ್ಯರು ಪಾಲ್ಗೊಂಡಿದ್ದರು.