Share this news

ಮೂಲ್ಕಿ :ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇವರ ಜಂಟೀ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು.

ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ, ಕಿನ್ನಿಗೋಳಿ ಇದರ ಆಡಳಿತ ನಿರ್ದೇಶಕರಾದ ಮಾಧವ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಯೋಗಾಭ್ಯಾಸವು ನಮ್ಮ ಮನಸ್ಸನ್ನು ಶಾಂತವಾಗಿರಿಸುವುದಲ್ಲದೆ ದೈನಂದಿನ ಕೆಲಸದ ಒತ್ತಡವನ್ನು ಕಡಿಮೆ ಮಾಡಿ ಮನಸ್ಸು ಮತ್ತು ಆರೋಗ್ಯ ಎರಡನ್ನೂ ಆರೋಗ್ಯವಾಗಿ ಇರಿಸುತ್ತದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಯೋಗ ಶಿಕ್ಷಕರಾದ ಕುಮಾರ್ ತೋಕೂರು ಮಾತನಾಡಿ ಯೋಗದ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರೂ ಯೋಗವನ್ನು ತಮ್ಮ ದಿನನಿತ್ಯದ ಜೀವನಕ್ರಮವನ್ನಾಗಿ ರೂಢಿಸಿಕೊಂಡರೆ, ಹಲವಾರು ರೋಗಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಸಲಹೆ ನೀಡಿದರು.

ಸ್ಪೋರ್ಟ್ಸ್ ಕ್ಲಬ್ ನ ಗೌರವಾದ್ಯಕ್ಷರಾದ ಮೋಹನ್ ದಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಯೋಗಕ್ಷೇಮವನ್ನು ಸುಧಾರಿಸಲು ಯೋಗಾಭ್ಯಾಸವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ವೇದಿಕೆಯಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಅದ್ಯಕ್ಷರಾದ ಸಂತೋಷ್ ದೇವಾಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *