Share this news

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್ ಗಿರಿಯನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.

ಇಂದು ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *