Share this news

ದಾವಣಗೆರೆ: ಕಾಂಗ್ರೆಸ್ ರಾಜ್ಯವನ್ನು ನಾಯಕರ ತಿಜೋರಿ ತುಂಬಿಸುವ ಎಟಿಎಂ ಆಗಿ ಮಾತ್ರ ಕಾಣುತ್ತಿದೆ. ಕಾಂಗ್ರೆಸ್‌ನವರ ಪೊಳ್ಳು ಭರವಸೆ ನೀಡುತ್ತಿದ್ದಾರೆ. ಅದಕ್ಕೆ ಹಿಮಾಚಲ ಪ್ರದೇಶವೇ ಉದಾಹರಣೆ. ಅಲ್ಲಿ ಚುನಾವಣೆಗೂ ಮುನ್ನ ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದರು. ಆದರೆ ಆಮೇಲೆ ಬಜೆಟ್‌ನಲ್ಲಿ ಏನೇನೂ ನೀಡಲಿಲ್ಲ. ಕರ್ನಾಟಕದಲ್ಲಿಯೂ ಅವರಿಗೆ ಯಾವುದೇ ಪಾಸಿಟಿವ್ ಅಜೆಂಡಾಗಳಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಇಂದು ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಮಹಾಸಂಗಮ ಸಮಾವೇಶದಲ್ಲಿ ಮಾತನಾಡಿದರು. ದಲಿತ, ಆದಿವಾಸಿ ಸೇರಿದಂತೆ ವಂಚಿತ ಸಮುದಾಯಗಳ ಏಳಿಗೆಯೇ ನಮ್ಮ ಆದ್ಯತೆಯಾಗಿದೆ. ಎಲ್ಲ ಆಶಯಗಳನ್ನು ಈಡೇರಿಸುವುದಕ್ಕಾಗಿ ಪೂರ್ಣ ಬಹುಮತದ ಅಗತ್ಯವಿದೆ. ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.

ಹಿAದೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿತ್ತು. ಆ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನ ಹೆಚ್ಚು ರೈತರಿಗೆ ದೊರೆಯದಂತೆ ಮಾಡಿತ್ತು. ಆದರೆ, ಡಬಲ್ ಎಂಜಿನ್ ಸರ್ಕಾರ ಬಂದ ನಂತರ ಹೆಚ್ಚು ರೈತರಿಗೆ ಪ್ರಯೋಜನ ದೊರೆಯುವಂತಾಯಿತು ಎಂದರು. ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ನೋಡಿದೆ. ರಾಜ್ಯದ ಪ್ರತಿಪಕ್ಷದ ಪ್ರಮುಖ ನಾಯಕರೊಬ್ಬರು ಕಾರ್ಯಕರ್ತರ ಕಪಾಳಕ್ಕೆ ಹೊಡೆಯುತ್ತಿದ್ದರು. ತಮ್ಮದೇ ಪಕ್ಷದ ಕಾರ್ಯಕರ್ತರನ್ನು ಗೌರವಿಸದವರು ಜನತಾ ಜನಾರ್ದನನ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಬಿಜೆಪಿಯಲ್ಲಿ ಹಾಗಲ್ಲ. ಹಿರಿಯ, ಕಿರಿಯ ಎಂಬುದಿಲ್ಲ. ಎಲ್ಲರೂ ಒಂದೇ. ಎಲ್ಲ ಕಾರ್ಯಕರ್ತರನ್ನೂ ಗೌರವಿಸುತ್ತೇವೆ. ಕರ್ನಾಟಕದ ಎಲ್ಲ ಕಾರ್ಯಕರ್ತರೂ ನನ್ನ ಪರಮ ಮಿತ್ರರು. ನನ್ನ ಸಹೋದರರು ಎಂದು ಮೋದಿ ಹೇಳಿದರು.

ಹರಿಹರೇಶ್ವರ್ ಮಂದಿರದ ರೂಪದಲ್ಲಿ ಹರಿ ಮತ್ತು ಹರರ ಸಮನ್ವಯವಾಗಿದೆ. ಅಂಥ ಹರಿಹರದ ಸಮೀಪದಲ್ಲಿರುವ ಈ ಪುಣ್ಯ ಕ್ಷೇತ್ರದಲ್ಲಿ ಕರ್ನಾಟಕ ಬಿಜೆಪಿಯ ನಾಲ್ಕು ವಿಜಯ ಯಾತ್ರೆಗಳ ಮಹಾಸಂಗಮವಾಗಿದೆ. ಇದಕ್ಕಾಗಿ ಕರ್ನಾಟಕ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೆ ಹೃದಯಾಂತರಾಳದ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಮೋದಿ ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಕರ್ನಾಟಕದಲ್ಲಿ ಬಹುಮತ ಪಡೆದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ಮೋದಿ ಪ್ರಧಾನಿಯಾದ ಬಳಿಕ ಒಂದು ದಿನವೂ ವಿಶ್ರಾಂತಿ ಪಡೆದಿಲ್ಲ. ನಾವು ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸೋಣ. 2 ತಿಂಗಳು ಸರ್ಕಾರ ಯೋಜನೆಗಳನ್ನು ತಿಳಿಸಿ ಜನರ ಮನ ಗೆಲ್ಲೋಣ ಎಂದರು.

ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಮಹಾಸಂಗಮ ಸಮಾವೇಶಕ್ಕೂ ಮುನ್ನ ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ನಂತರ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದರು. ಕೆ.ಆರ್.ಪುರಂನಿAದ ವೈಟ್‌ಫೀಲ್ಡ್ವರೆಗಿನ ನೂತನ ಮೆಟ್ರೋ ಮಾರ್ಗ 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 13.71 ಕಿಲೋಮೀಟರ್ ಇರುವ ನೂತನ ನೇರಳ ಮಾರ್ಗ 12 ಮೆಟ್ರೋ ನಿಲ್ದಾಣಗಳನ್ನು ಹೊಂದಿದೆ.

Leave a Reply

Your email address will not be published. Required fields are marked *