ದಾವಣಗೆರೆ : ಪೋಕ್ಸೋ ಪ್ರಕರಣದ ಆರೋಪಿಗೆ ಸಹಕಾರ ನೀಡಿ ಅದಕ್ಕೆ ಪ್ರತಿಯಾಗಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ ಮದನ ಕುಮಾರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್ ಕೊಟೇಗೌಡರ್ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಇದರಲ್ಲಿ 1.17 ಲಕ್ಷ ರೂ ಹಣ ಪಡೆದು ನಂತರ ಬಾಕಿ ಉಳಿದ 1.87 ಲಕ್ಷ ಹಣವನ್ನು ಚೆಕ್ ಮೂಲಕ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ದಾವಣಗೆರೆಯ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ರೇಖಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.