Share this news

ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ವರದಿ ಸಭೆ (ಕೆಡಿಪಿ) ಬುಧವಾರ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಮಟ್ಟಕ್ಕೆ ಸಂಬAಧಿಸಿದAತೆ ಇಲಾಖೆಯ ಯೋಜನೆಗಳ ಪ್ರಗತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಪಂಚಾಯತ್ ರಾಜ್ ಇಂಜಿನಿಯರಿAಗ್ ಉಪ ವಿಭಾಗ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮೆಸ್ಕಾಂ,ಕೃಷಿ, ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ, ಕಂದಾಯ, ಶಿಕ್ಷಣ,ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯ ಅಭಿವೃದ್ಧಿ ಯೋಜನೆಗಳ ವರದಿಯನ್ನು ನೀಡಿದರು. ಪಂಚಾಯತ್ ಸದಸ್ಯರುಗಳು,ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *