Share this news

ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ಜಟಾಪಟಿ ನಡುವೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಗುರುವಾರ ಹೊರಬಿದ್ದಿದೆ.  ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಆಡಳಿತಾತ್ಮಕ ನಿಯಂತ್ರಣ ಕೇಂದ್ರ ಸರ್ಕಾರದ ಬಳಿ ಇರಬೇಕಾದರೆ ದೆಹಲಿಯಲ್ಲಿ ಚುನಾಯಿತ ಸರ್ಕಾರ ಇರುವುದರ ಉದ್ದೇಶವೇನು ಎಂದು  ಪ್ರಶ್ನಿಸಿದೆ.

ರಾಜಧಾನಿ ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ವಿವಾದದ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ.

ಸರ್ಕಾರವು ಅಧಿಕಾರಿಗಳನ್ನು ನೇಮಕ ಮಾಡುವ ಮತ್ತು ವರ್ಗಾವಣೆ ಮಾಡುವ ಹಕ್ಕನ್ನು ಹೊಂದಿರುತ್ತದೆ ಎಂದು ಹೇಳಿದೆ. ತೀರ್ಪು ಪ್ರಕಟಿಸುವ ಮುನ್ನ ಸಿಜೆಐ, ಎಲ್ಲ ನ್ಯಾಯಾಧೀಶರ ಒಪ್ಪಿಗೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಸಂಬಂಧಿತ ಅಧಿಕಾರಗಳು ಕೇಂದ್ರದ ಬಳಿ ಇರುತ್ತವೆ ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಹೇಳಿದೆ.

ಸುಪ್ರೀಂ ಕೋರ್ಟ್ ಗುರುವಾರ ಸರ್ವಾನುಮತದ ತೀರ್ಪಿನಲ್ಲಿ ಚುನಾಯಿತ ಸರ್ಕಾರದ ಪರವಾಗಿ ತೀರ್ಪು ನೀಡಿತು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭೂಮಿ ಹೊರತುಪಡಿಸಿ ಎಲ್ಲಾ ಸೇವೆಗಳ ಮೇಲೆ ಅಧಿಕಾರವನ್ನು ಹೊಂದಿರುತ್ತದೆ ಎಂದು ಹೇಳಿದೆ.

Leave a Reply

Your email address will not be published. Required fields are marked *