ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ಕೌಂಟರ್ ಮಾಡಿದ್ದಾರೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ POJK ನಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಹೇಳಿದ್ದಾರೆ.ಇಂದಿನಿಂದ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಒಂದು ವಾರದ ಹಿಂದೆ ಇದೇ ರೀತಿಯಲ್ಲಿ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನ ಮಾಡಿದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್ ಕೌಂಟರ್ ಮಾಡಿದ ನಂತರ ಈ ಘಟನೆ ನಡೆದಿದೆ.
ವಜ್ರ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್, ಮೇಜರ್ ಜನರಲ್ ಗಿರೀಶ್ ಕಾಲಿಯಾ, ಕಾರ್ಯಾಚರಣೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದವಿದೆ. ಆದರೆ ಇತ್ತೀಚಿನ ದಿನಗಳಲ್ಲಿ, ಈ ಒಪ್ಪಂದವನ್ನು ಅವರು ಮುರಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಗುಪ್ತಚರ ಮಾಹಿತಿಯನ್ನು ಕೂಡ ಅವರು ಪಡೆಯುತ್ತಿದ್ದಾರೆ.