ಕಾರ್ಕಳ: ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರರನ್ನು ನೆನಪಿಸಿಕೊಳ್ಳುವುದರ ಜೊತೆ ಜೊತೆಗೆ ಭಾರತೀಯ ಮೌಲ್ಯಗಳನ್ನು ವೃದ್ಧಿಸುವ ಅನೇಕ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕಾಗಿದೆ. ಆ ನಿಟ್ಟಿನಲ್ಲಿ ಇಂದಿನ ಮಕ್ಕಳಿಗೆ ದೇಶ ಪ್ರೇಮದ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಹಿರಿಯ ರಂಗಕರ್ಮಿ ಚಂದ್ರನಾಥ ಬಜಗೋಳಿ ಹೇಳಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶೋಭಾ ಧ್ವಜಾರೋಹಣವನ್ನು ನೆರವೇರಿಸಿದರು.
ಹಿರಿಯ ಸಹ ಶಿಕ್ಷಕಿ ಶ್ರೀಮತಿ ಗ್ರೇಸ್ ವಜ್ರಾವತಿ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಣ ಇಲಾಖೆಯ ಸಿಆರ್‌ಪಿ ಜ್ಯೋತಿ ನಾಯಕ್ ಮಾತನಾಡಿ, ಸ್ವಾತಂತ್ರ‍್ಯಕ್ಕಾಗಿ ಹೋರಾಡಿ ಬಲಿದಾನ ಮಾಡಿದ ಮಹನೀಯರನ್ನು ನಾವು ಸ್ಮರಿಸಬೇಕು. ಅವರ ಜೀವನ ಚರಿತ್ರೆಯ ಕತೆಗಳನ್ನು ವಿದ್ಯಾರ್ಥಿಗಳು ಓದಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪೋಷಕರಾದ ಪರಸಪ್ಪ ಜೋಗಿನ, ಬಾಲಾಜಿ ಜ್ಯುವೆಲ್ಲರಿಯ ಮಾಲಕ ಪ್ರಭಾಕರ ಪಾಟೀಲ್ , ಶಾಲಾ ಹಿರಿಯ ಸಹ ಶಿಕ್ಷಕಿ ಶಶಿಕಲಾ, ಗೌರವ ಶಿಕ್ಷಕಿ ಮಧುಶ್ರೀ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಕುಮಾರಿ ಅಶ್ವಿನಿ ನಿರೂಪಿಸಿದರು.




