ಅಜೆಕಾರು : ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 38 ವರ್ಷಗಳ ಕಾಲ ಗ್ರೂಪ್-ಡಿ ನೌಕರರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ ಪಾರ್ವತಿ. ಕೆ. ಅವರಿಗೆ ಬೀಳ್ಳೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಹಾಗೂ ಪಾರ್ವತಿ.ಕೆ ಕುಟುಂಬಸ್ಥರು ಉಪಸ್ಥಿತರಿದ್ದರು.ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹೇಮಲತಾ ಎಂ.ಎನ್ ಕಾರ್ಯಕ್ರಮ ನಿರೂಪಿಸಿದರು.