Share this news

ಬೆಂಗಳೂರು : ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 74.64 ಫಲಿತಾಂಶ ಬಂದಿದ್ದು ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು.

ಪ್ರತೀ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ,ಉಡುಪಿ ದ್ವಿತೀಯ ಸ್ಥಾನ ಪಡೆದಿದ್ದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಕೆಎಸ್ ಇಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಸುದ್ದಿಗೋಷ್ಠಿಯಲ್ಲಿ ಇಂದು ದ್ವಿತೀಯ ಪಿಯುಸಿಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ.ಒಟ್ಟು 61 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 5,24, 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ 593 ಅಂಕಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಅನನ್ಯಾ 600ಕ್ಕೆ 600 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಕೌಶಿಕ್ 596 ಅಂಕ ಪಡೆದು ರಾಜ್ಯದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ

ಕಲಾವಿಭಾಗದಲ್ಲಿ 1,34, 876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 61.22 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 75.89 ರಷ್ಟು ಫಲಿತಾಂಶ ಬಂದರೆ, ವಿಜ್ಞಾನ ವಿಬಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 85.71 ರಷ್ಟು ಫಲಿತಾಂಶ ಬಂದಿದೆ.

Leave a Reply

Your email address will not be published. Required fields are marked *