ಕಾರ್ಕಳ: ರಾಜ್ಯ ಕಾಂಗ್ರೆಸ್ಸಿನ ಸೌಹಾರ್ದ ಸಂಘಟನೆಯ ರಾಯಭಾರಿ ಎಂದೇ ಗುರುತಿಸಲ್ಪಟ್ಟಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರ ಅಕಾಲಿಕ ನಿಧನವು ಪ್ರಜಾತಂತ್ರ ವ್ಯವಸ್ಥೆಗೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿದ್ದಾರೆ.

ಉತ್ತಮ ಸಂಸದೀಯ ಪಟುವಾಗಿದ್ದ ಧ್ರುವ ನಾರಾಯಣ ರಾಜಕೀಯ ಕ್ಷೇತ್ರದಲ್ಲಿ ಪಾಲಿಸಿಕೊಂಡು ಬಂದಿದ್ದ ರಾಜಧರ್ಮ ಮುಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದೆ.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತನ್ನದೇ ವರ್ಚಸ್ಸು ಹೊಂದಿದ್ದ ಧ್ರುವ ನಾರಾಯಣ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಿದೆ ಎಂದು ಬಿಪಿನ್ ಚಂದ್ರಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ
