ಬೆಂಗಳೂರು : ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮವನ್ನು ನೆರೆವೇರಿಸುವ ಸಂದರ್ಭದಲ್ಲಿ ಕೆಲವು ಮುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು, ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದೇವಸ್ಥಾನ – ಮಠ ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಗೃಹ ಸಚಿವ ಜಿ. ಪರಮೇಶ್ವರ್ ಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ದೇವಸ್ಥಾನ – ಮಠ ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಮೋಹನ್ ಗೌಡ ಮಾತನಾಡಿ, ಈ ಉತ್ಸವವ ಪ್ರತೀವರ್ಷ ಅನಾದಿಕಾಲದಿಂದ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಕೆಲವು ದುಷ್ಕರ್ಮಿಗಳು ಪೂರ್ವನಿಯೋಜಿತ ಷಡ್ಯಂತ್ರ್ಯವನ್ನು ಮಾಡಿ, ಸದರಿ ಉತ್ಸವದಲ್ಲಿ ದೊಂಬಿ, ಗಲಾಟೆ ಮಾಡಿ, ಶ್ರೀ ನಂಜುಂಡೇಶ್ವರ ದೇವರಿಗೆ ಧಿಕ್ಕಾರ ಕೂಗಿ, ಉತ್ಸವ ಆಚರಣೆಗೆ ಭಂಗ ತರುವ ಮೂಲಕ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿ, ಉತ್ಸವ ಮೂರ್ತಿಯನ್ನು ಅಪವಿತ್ರ ಮಾಡಿದ್ದಾರೆ. ಸದರಿ ಘಟನೆಯು ಅತ್ಯಂತ ಗಂಭೀರವಾಗಿದ್ದು, ರಾಜ್ಯದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ಘಾಸಿಯುಂಟು ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಘಟನೆಯನ್ನು ಖಂಡಿಸಿ, ಭಕ್ತರು ಮತ್ತು ಸ್ಥಳಿಯರು ಸ್ವಯಂಪ್ರೇರಿತರಾಗಿ ಶಾಂತಿಯುತ ಪ್ರತಿಭಟನೆಯನ್ನು ಮಾಡಿದ್ದಾರೆ. ಆದರೆ ಪೊಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯ` ಎಂದರು.
ಈ ಘಟನೆಯ ನಂತರ ಅನೇಕ ಹಿಂದೂ ವಿರೋಧಿಗಳು ಶ್ರೀ ಶ್ರೀಕಂಠೇಶ್ವರ ದೇವರ ಬಗ್ಗೆ ಅತ್ಯಂತ ಕೆಟ್ಟದಾಗಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಾಕಿ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಹಾಸಂಘದ ರಾಜ್ಯ ಸಂಯೋಜಕ ಮೋಹನ್ ಗೌಡ, ಚಿಕ್ಕಬಳ್ಳಾಪುರದ ಅನಂತ ಪದ್ಮನಾಭ ದೇವಸ್ಥಾನದ ರಮೇಶ್ ಪಿ, ಅಣ್ಣಿಗೆರೆಯ ರೇಣುಕಾ ಯಲ್ಲಮ್ಮ, ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಎ. ಪಿ ಸತ್ಯನಾರಾಯಣ ಶ್ರೇಷ್ಟಿ, ದಾಸನಪುರ ಪದ್ಮಾವತಿ ಶ್ರೀನಿವಾಸ ದೇವಸ್ಥಾನದ ಜಯರಾಮ್ ಎಸ್, ವಿಜಯನಗರದ ವಾಸವಿ ದೇವಸ್ಥಾನದ ಎಮ್.ಎಲ್ ಶ್ರೀ ರಾಮ್, ಬನ್ನೇರುಘಟ್ಟದ ವೇದಮೂರ್ತಿಗಳಾದ ಶ್ಯಾಮ ಸುಂದರ ಹಾಗೂ ಎಮ್. ಭಗತ್, ಹಿಂದೂ ಜನಜಾಗೃತಿ ಸಮಿತಿಯ ನೀಲೇಶ್ವರ, ನವೀನ್ ಗೌಡ ಹಾಗೂ ಶರತ್ ಕುಮಾರ್, ಸಿದ್ಧಾಪುರ ಸೇರಿದಂತೆ 10 ಕ್ಕೂ ಹೆಚ್ಚು ದೇವಸ್ಥಾನಗಳ ಅರ್ಚಕರು, ಟ್ರಸ್ಟಿಗಳು, ವಿಶ್ವಸ್ಥರು ಹಾಗೂ ದೇವಸ್ಥಾನಗಳ ಮಹಾಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾನ್ಯ ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ