ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಬ್ರಾಂಡ್ ಆಗಿರುವ ನಂದಿನಿಯನ್ನು ಅಮುಲ್ ಕಂಪೆನಿಯ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲವೆಂದು ಕೆಎಂಎಫ್ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮೂಲ್ ಜತೆ ನಂದಿನಿ ಬ್ರಾಂಡ್ ಅನ್ನು ವಿಲೀನಗೊಳಿಸಲಾಗುತ್ತಿದೆ ಎನ್ನುವ ಸುಳ್ಳು ವದಂತಿ ಕುರಿತು ಪ್ರತಿಕ್ರಿಯಿಸಿರುವ ಕೆಎಂಎಫ್ ಅಧಿಕಾರಿಗಳು ರಾಜ್ಯದಲ್ಲಿ ನಂದಿನಿಯ ಬದಲಿಗೆ ಅಮೂಲ್ ಉತ್ಪನ್ನಗಳ ಮಾರಾಟ ಮಾಡುವ ಯತ್ನ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ. ದೇಶದಲ್ಲೇ 2ನೇ ಅತೀ ದೊಡ್ಡ ಸಹಕಾರ ಹಾಲು ಮಹಾಮಂಡಳ ಸಂಸ್ಥೆ ಕೆಎಂಎಫ್ ಆಗಿದೆ. 26 ಲಕ್ಷ ಗ್ರಾಮೀಣ ರೈತರಿಂದ ದಿನಂಪ್ರತಿ ಸರಾಸರಿ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ಸುಮಾರು 160ಕ್ಕೂ ಹೆಚ್ಚು ವಿವಿಧ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಜನತೆಗೆ ಕಳೆದ 4 ದಶಕಗಳಿಂದ ಒದಗಿಸುತ್ತಿದೆ. ಹಾಲಿನ ಶೇಖರಣೆಯನ್ನು ಮುಂದಿನ ದಿನಗಳಲ್ಲಿ ಪ್ರತಿನಿತ್ಯ 1 ಕೋಟಿಗೂ ಅಧಿಕ ಲೀಟರ್ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ ಹಾಲಿನ ಸರಾಸರಿ ಶೇಖರಣೆ ಶೇ.6ರಿಂದ 7ರಷ್ಟು ಪ್ರಗತಿಯಿರುತ್ತದೆ. ಮಾರಾಟವು ಶೇ.25ರಷ್ಟು ಪ್ರಗತಿಯಲ್ಲಿ ಸಾಧಿಸುತ್ತಾ ದೇಶದ ವಿವಿಧ ರಾಜ್ಯಗಳಲ್ಲಿ ಹೊರ ರಾಜ್ಯಗಳಲ್ಲೂ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಾ ಗ್ರಾಹಕರ ಆಯ್ಕೆಯ ನೆಚ್ಚಿನ ಬ್ರ‍್ಯಾಂಡ್ ಆಗಿದೆ ಎಂದು ತಿಳಿಸಿದೆ.
ಕೆಎಂಎಫ್ ಬಗ್ಗೆ ಕೆಲವು ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮತ್ತೊಂದು ದೊಡ್ಡ ಸಹಕಾರಿ ಸಂಸ್ಥೆಯೊAದಿಗೆ ವಿಲೀನ ಮಾಡಲಾಗುತ್ತಿದೆ. ನಂದಿನ ಬ್ರ‍್ಯಾಂಡ್ ಅನ್ನು ಮತ್ತೊಂದು ಸಹಕಾರಿ ಸಂಸ್ಥೆಗೆ ಮಾರಾಟ ಮಾಡಲಾಗುತ್ತಿದೆ. ನಂದಿನಿ ಬ್ರ‍್ಯಾಂಡ್ ಹಾಲು ಇನ್ನೂ ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಮತ್ತು ಅಂತಹ ಯಾವುದೇ ಚರ್ಚೆಗಳು ಕೆಎಂಎಫ್ ನಲ್ಲಿ ನಡೆದಿಲ್ಲವೆಂದು ಕೆಎಂಎಫ್ ತಿಳಿಸಿದೆ.
ಕೆಎಂಎಫ್ ಹೆಚ್ಚುವರಿಯಾಗಿ ಹಾಲು ಉತ್ಪಾದನೆ ಮಾಡುವುದಕ್ಕಾಗಲಿ, ವ್ಯಾಪಾರ ವೃದ್ಧಿಗೋಸ್ಕರವಾಗಲೀ, ದೇಶದ ಯಾವುದೇ ಸಹಕಾರ ಸಂಸ್ಥೆ ಅಥವಾ ಹಾಲು ಉತ್ಪಾದನಾ ಮಹಾಮಂಡಳಗಳೊAದಿಗೆ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ. 26 ಲಕ್ಷ ಹೈನುಗಾರ ರೈತರ ಶ್ರಮ, 2 ಲಕ್ಷಕ್ಕೂ ಅಧಿಕ ಕಾರ್ಮಿಕರ ದುಡಿಮೆ, 6 ಕೋಟಿಗೂ ಅಧಿಕ ಗ್ರಾಹಕರ ಹಾರೈಕೆಯಿಂದ ಸಂಸ್ಥೆಯು ದೇಶದಲ್ಲೇ ಅತೀ ವೇಗವಾಗಿ ಬೆಳೆಯುತ್ತಿರೋ ಹಾಲು ಉತ್ಪಾದನಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳು ಎಂಬುದಾಗಿ ಸ್ಪಷ್ಟ ಪಡಿಸಿದೆ.