Share this news

ರಾಮನಗರ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶೀಘ್ರದಲ್ಲಿ ಡಿಕೆಶಿ ಅವರು ಮತ್ತೆ ತಿಹಾರ್ ಜೈಲಿಗೆ ತೆರಳಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದರು. ಇವರ ಈ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನನ್ನು ಜೈಲಿಗೆ ಕಳುಹಿಸಲು ಷಡ್ಯಂತ್ರ ನಡೆಯುತ್ತಿದೆ ನಾನು ಯಾವುದೇ ಸವಾಲುಗಳನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ
ತಮ್ಮನ್ನು ಜೈಲಿಗೆ ಕಳುಹಿಸುತ್ತೇವೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪದೇಪದೆ ಹೇಳುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು,ನನ್ನ ಏಳಿಗೆ ಸಹಿಸದೇ ನನ್ನನ್ನು ಜೈಲಿಗೆ ಕಳುಹಿಸಲು ಬಿಜೆಪಿಯ ನಾಯಕರು ಹಾಗೂ ಕೆಲವರು ಪಿತೂರಿ ನಡೆಸುತ್ತಿದ್ದು, ನನ್ನ ಈ ಬಗ್ಗೆ ನಮ್ಮ ಜಿಲ್ಲೆಯವರು ಸೇರಿ ಅನೇಕರು ಮಾತನಾಡಿದ್ದಾರೆ. ನಾನು ಎಲ್ಲದಕ್ಕೂ ಸಿದ್ದನಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಹೇಳಿದರು.
ಸಿಬಿಐ, ಬೇರೆಯವರ ಮೂಲಕ ಏನೇನೋ ಮಾಡಿಸುತ್ತಿದ್ದಾರೆಂಬುದು ನನಗೂ ಗೊತ್ತಿದೆ.ಸಮಯ ಬಂದಾಗ ಆ ಕುರಿತು ಮಾತನಾಡುತ್ತೇನೆ ಎಂದರು.
ಡಿ.ಕೆ. ಸೋದರರನ್ನು ರಾಮನಗರದಲ್ಲಿ ಕಟ್ಟಿಹಾಕಲು ಬದ್ಧವೈರಿಗಳು ಒಂದಾಗಿದ್ದಾರೆಯೇ ಎಂಬ ಪ್ರಶ್ನೆಗೆ, ಯಾರು ಏನಾದರೂ ಮಾಡಲಿ. ಅವರು ಅವರ ಕರ್ತವ್ಯ ಮಾಡುತ್ತಿದ್ದಾರೆ. ರಾಜಕಾರಣ ಮಾಡುವವರನ್ನು ನಾವು ಬೇಡ ಎನ್ನಲು ಸಾಧ್ಯವೇ? ಹಿಂದೆಯೂ ಸುರೇಶ್ ಚುನಾವಣೆಗೆ ನಿಂತಾಗ ದಳ ಮತ್ತು ಬಿಜೆಪಿ ಒಪ್ಪಂದ ಮಾಡಿಕೊಂಡು ಅನಿತಾ ಕುಮಾರಸ್ವಾಮಿಯನ್ನು ಮಾತ್ರ ಕಣಕ್ಕಿಳಿಸಿದ್ದರು ಎಂದರು.

 

Leave a Reply

Your email address will not be published. Required fields are marked *