Share this news

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮಗೆ ನೋಟಿಸ್ ನೀಡಿರುವ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ದೊಡ್ಡ ದೊಡ್ಡವರಿದ್ದಾರೆ, ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. 

ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಆದರೂ ಯಾವ ಲೆಕ್ಕಾಚಾರದಲ್ಲಿ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲಾ ಬಂದಿದೆ. ಆಮೇಲೆ ವೈಯಕ್ತಿಕವಾಗಿ ನನ್ನ ಬಳಿ ಬರುತ್ತಾರೆ. ನನ್ನನ್ನು ಬಂಧಿಸಿ ಜೈಲಿಗೆ ಹಾಕುವುದಾದರೆ ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು

ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದಕ್ಕೂ ಹೆದರಲ್ಲ. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಮುಂದಿನ ಪ್ರೊಸೀಜರ್ ಲೋಕಾಯುಕ್ತ ನೋಡಿಕೊಳ್ಳುತ್ತದೆ. ತನಿಖೆ ನಡೆಸಲಿದೆ ಎಂದರು.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *