ಕಾರ್ಕಳ: ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಏಕಾಎಕಿ ಕುಸಿದುಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ಭಾನುವಾರ ಸಂಭವಿಸಿದೆ.
ನಲ್ಲೂರು ಗ್ರಾಮದ ವಿಶ್ವನಾಥ (43) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಸಾಣೂರಿನ ಸೌತ್ ಇಂಡಿಯಾ ಕಾರ್ಪೋರೇಷನ್ ಎಂಬ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಬಂದು ಮಧ್ಯಾಹ್ನದವರೆಗೆ ಕೆಲಸ ಮಾಡಿ ಮಧ್ಯಾಹ್ನ 1 ಗಂಟೆಗೆ ವಿಶ್ರಾಂತಿ ವೇಳೆಗೆ ಏಕಾಎಕಿ ಸುಸ್ತಾಗಿ ಕುಸಿದುಬಿದ್ದವರನ್ನು ತಕ್ಷಣವೇ ಕಾರ್ಕಳದ ಸಿಟಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ