Share this news

ಬೆಂಗಳೂರು:ಅನ್ಯ ರಾಜ್ಯಗಳಲ್ಲಿ ಜಾತಿಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ, ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡ ಹೆಚ್ಚಾಗಿದೆ.ಈ ನಡುವೆ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾತಿಗಣತಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ನಾವು ಈ ಹಿಂದಿನ ದತ್ತಾಂಶಗಳ ಆಧಾರದಲ್ಲಿ ಜಾತಿಗಣತಿ ವರದಿಯನ್ನು ಸಿದ್ಧಪಡಿಸಿದ್ದೇವೆ. ಅದನ್ನು ನವೆಂಬರ್ ಅಂತ್ಯದೊಳಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.ನಾವು ಹಿಂದಿನ ವರದಿಯಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಆ ದತ್ತಾಂಶಗಳ ವರದಿಯನ್ನು ಯಥಾಪ್ರಕಾರವಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದ ಅವರು, ಜಾತಿಗಣತಿ ವರದಿಯನ್ನು ಸ್ವೀಕರಿಸಬಹುದು ಅಥವಾ ಕೈಬಿಡಬಹುದು ಅದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು

 

 

 

 

 

 

 

 

Leave a Reply

Your email address will not be published. Required fields are marked *