ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿ ಗಣತಿ ಬಿಡುಗಡೆ ಸಂಬAಧ ವಿರೋಧ ಹೆಚ್ಚುತ್ತಿದ್ದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿದೆ. ಇದರ ಬೆನ್ನಲ್ಲೇ ಇದೀಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಜಾತಿ ಗಣತಿ ವರದಿ ನೀಡಲು ಮುಂದಾಗಿದ್ದಾರೆ. ನವೆಂಬರ್ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ನಿರ್ಮಲಾನಂದ ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅAಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಜಾತಿಗಣತಿ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ, ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೆಕು ಎಂದು ಹೇಳಿದ್ದರೆ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಸಂಬAಧ ಇಡೀ ದೇಶಕ್ಕೆ ಒಂದು ನೀತಿ ರೂಪಿಸುವತ್ತ ಬಿಜೆಪಿ ಚಿಂತನೆ ನಡೆಸಿದೆ. ಹೀಗಾಗಿ ರಾಜ್ಯದ ಆಯ್ದ ಒಬಿಸಿ ನಾಯಕರನ್ನು ಕೂಡಾ ಸಭೆಗೆ ಆಹ್ವಾನಿಸಿ ರಾಜ್ಯದ ಸ್ಥಿತಿಯ ಬಗ್ಗೆ ಕೂಡಾ ಮಾಹಿತಿ ಪಡೆಯಲಾಗಿದೆ. ಜಾತಿ ಗಣತಿ ವರದಿ ವಿಚಾರವಾಗಿ ಸರ್ಕಾರದಲ್ಲಿ ದ್ವಂದ್ವ ಅಭಿಪ್ರಾಯ ಇದ್ದರೆ ವಿಪಕ್ಷ ಬಿಜೆಪಿ ಮೊದಲು ಸರ್ಕಾರ ತನ್ನ ನಿರ್ಧಾರ ತೆಗೆದುಕೊಳ್ಳಲಿ ಎಂದು ದಾಳ ಉರುಳಿಸಿದೆ






