Share this news

ಕಾರ್ಕಳ:ಪಶು ಆಹಾರ ಹಾಗೂ ಮೇವಿನ ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾಗುತ್ತಿದ್ದು ಇದರಿಂದ ಹೈನುಗಾರಿಕೆ ನಷ್ಟದಲ್ಲಿದೆ. ಇದಲ್ಲದೇ ಪ್ರತೀ ಲೀಟರ್ ಹಾಲಿಗೆ ನೀಡುತ್ತಿರುವ 5 ರೂ ಪ್ರೋತ್ಸಾಹಧನವು ಕೂಡ ಬಿಡುಗಡೆಯಾಗದ ಹಿನ್ನಲೆಯಲ್ಲಿ ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಿAದ ಹಾಲು ಉತ್ಪಾದಕ ಹೈನುಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಬಾಕಿಯಿದ್ದು ಸುಮಾರು 615 ಕೋ.ರೂ ಬಾಕಿಯಿದ್ದು ಕೂಡಲೇ ರಾಜ್ಯ ಸರ್ಕಾರವು ಬಾಕಿ ಇರಿಸಿಕೊಂಡ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕೆಂದು ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರು ಹಾಗೂ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಆಗ್ರಹಿಸಿದ್ದಾರೆ.
ಹಾಲು ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣದಿಂದ ರಾಜ್ಯದ ಹೈನುಗಾರ ಕುಟುಂಬಗಳು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದು,ಇದರಿಂದ ಹಲವು ಒಕ್ಕೂಟಗಳಲ್ಲಿ ಬೇಡಿಕೆಯಷ್ಟು ಪ್ರಮಾಣದಲ್ಲಿ ಹಾಲು ಪೂರೈಕೆಯಾಗದೇ ಒಕ್ಕೂಟಗಳು ಮತ್ತು ಹೈನುಗಾರರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ನಷ್ಟವನ್ನು ತಪ್ಪಿಸಲು ಸರಕಾರವು ಪಶು ಆಹಾರಕ್ಕೆ ಕೆಜಿ ಒಂದಕ್ಕೆ ಕನಿಷ್ಠ ಐದು ರೂಪಾಯಿ ಸಬ್ಸಿಡಿ ನೀಡುವ ಮೂಲಕ ಹಾಲಿನ ಪತ್ಪಾದನಾ ವೆಚ್ಚ ಹೆಚ್ಚಳದ ಹೊರೆಯನ್ನು ಇಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಈಗಾಗಲೇ ಬಾಕಿ ಉಳಿದಿರುವ ಹಾಲಿನ ಪ್ರೋತ್ಸಾಹ ಧನವನ್ನು ರಾಜ್ಯ ಸರಕಾರವು ಕೂಡಲೇ ರೈತರ ಖಾತೆಗಳಿಗೆ ಏಕಗಂಟಿನಲ್ಲಿಪಾವತಿ ಮಾಡಿ, ಹೈನುಗಾರರಲ್ಲಿ ಜೀವನೋತ್ಸಾಹ ತುಂಬಿಸಬೇಕಿದೆ ಎಂದು ಸಾಣೂರು ನರಸಿಂಹ ಕಾಮತ್ ಸರ್ಕಾರವನ್ನು ಒತ್ತಾಯಿಸಿದ್ದಾರೆ

 

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

 

 

 

 
 

 

 
 

 

 
 

 

 
 

 

Leave a Reply

Your email address will not be published. Required fields are marked *