ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.

ಜೈನ ಮುನಿಗಳು ಕಾಣೆಯಾಗಿದ್ದು ಮುನಿ ಮಹಾರಾಜರನ್ನು ಹುಡುಕಿ ಕೊಡುವಂತೆ ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪೊಲೀಸರ ವಿಚಾರಣೆ ವೇಳೆ ಜೈನ ಮುನಿಗಳನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ .
ಆರೋಪಿಗಳು ಹತ್ಯೆ ಮಾಡಿ ಶವ ಎಲ್ಲಿ ಬಿಸಾಕಿದ್ದೇವೆ ಎಂದು ಸ್ಪಷ್ಟ ಮಾಹಿತಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹ ಕತ್ತರಿಸಿ ಕಟಕಬಾವಿ ಗ್ರಾಮದಲ್ಲಿ ತೆರೆದ ಕೊಳವೆಬಾವಿಯಲ್ಲಿ ಎಸೆದ್ದೇವೆ ಎಂದರೆ, ಮತ್ತೊಂದು ಬಾರಿ ಮೃತದೇಹ ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎನ್ನುತ್ತಿದ್ದಾರೆ. ಹೀಗಿರುವಾಗ ಪೊಲೀಸರು ಕಟಕಬಾವಿ ಗ್ರಾಮದಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ 6.30 ರಿಂದ ಜೈನಮುನಿ ಕಾಮಕುಮಾರನಂದಿ ಮೃತದೇಹದ ಶೋಧಕಾರ್ಯ ಮುಂದುವರೆಸಲಿದ್ದಾರೆ. ಇನ್ನು ತಾವು ಆಶ್ರಮದಿಂದಲೇ ಸ್ವಾಮೀಜಿಯನ್ನ ಅಪಹರಿಸಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.

ಹಣಕಾಸಿನ ವಿಚಾರಕ್ಕೆ ಈ ಕೊಲೆ ನಡೆದಿರಬಹುದು ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದ್ದು, ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬೀಳಲಿದೆ.

