ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪೂರ್ವ ತಯಾರಿಯ ಅಂಗವಾಗಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ನಾಳೆ ಬೆಳಿಗ್ಗೆ 10.30ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ಬಿಜೆಪಿ ರಾಜ್ಯ ನಾಯಕರಾದ ವಿ. ಸುನಿಲ್ ಕುಮಾರ್,ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಲಿದ್ದು, ಪಕ್ಷದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರು ಈ ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಲಿರುವರು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿಯ ಮಾಧ್ಯಮ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.