ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರದ ಜನತೆಗೆ ಮನವಿ ಮಾಡಿದ್ದಾರೆ.
ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತೀಯರು ತಮ್ಮ ಛಾಯಾಚಿತ್ರಗಳನ್ನು ‘ಹರ್ ಘರ್ ತಿರಂಗಾ’ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಬೇಕೆಂದು ಪ್ರಧಾನಿ ಮನವಿ ಮಾಡಿದ್ದಾರೆ.
“ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾನೆ ಮತ್ತು ಇದು ರಾಷ್ಟ್ರೀಯ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ `ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ. ತಿರಂಗಾದೊಂದಿಗೆ ನಿಮ್ಮ ಫೋಟೋಗಳನ್ನು ಇಲ್ಲಿ ಅಪ್ಲೋಡ್ ಮಾಡಿ… https://harghartiranga.com” ಎಂದು ಅವರು ಟ್ವೀಟ್ ಮಾಡಿದ್ದಾರೆ.