ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಆದರೆ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.
ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ