ನವದೆಹಲಿ:ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರಕಟಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮಗೊಳಿಸುವ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸರಣಿಯ ಸಭೆಗಳು ನಡೆಯುತ್ತಿದ್ದು ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
ಈ ಬಗ್ಗೆ ಇಂದು ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ.ಎಲ್ಲಾ ಗೊಂದಲಗಳನ್ನು ಬಗೆಹರಿಸಿ 2ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದರು
ನಾವು ಈಗಾಗಲೇ 124 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದೇವೆ. ಆಡಳಿತಾರೂಢ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದ ಹಿನ್ನೆಲೆಯಲ್ಲಿ ಇನ್ನೂ ಒಂದೇ ಒಂದು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಸುರ್ಜೇವಾಲ ಆರೋಪಿಸಿದ್ದಾರೆ.