ಹೆಬ್ರಿ: ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಹಾಗೂ ನಂದಿಕೇಶ್ವರ ದೇವಸ್ಥಾನದಲ್ಲಿ ಧರ್ಮಯೋಗಿ ಮೋಹನ ಸ್ವಾಮೀಜಿಯವರ ದ್ವಿತೀಯ ವರ್ಷದ ಆರಾಧನ ಮಹೋತ್ಸವವು ಜೂನ್ 30ರಂದು ಶುಕ್ರವಾರ ನಡೆಯಲಿದೆ.
ಬೆಳಿಗ್ಗೆ 7ರಿಂದ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಸಂಜೆ 6 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ .
ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ 7 ಗಂಟೆಯಿಂದ ತುಳು ಹಾಸ್ಯಮಯ ನಾಟಕ ನಾಯಿದ ಬೀಲ ಪ್ರದರ್ಶನಗೊಳ್ಳಲಿದೆ.