ಅಜೆಕಾರು : ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಪಂಚಾಯತ್ ನಲ್ಲಿ ನಾಳೆ ತಹಸೀಲ್ದಾರರ ಗ್ರಾಮ ವಾಸ್ತವ್ಯ ನಡೆಯಲಿದೆ.
ಮರ್ಣೆ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ ಮರ್ಣೆ ಗ್ರಾಮದ ಗ್ರಾಮಸ್ಥರು ಕಂದಾಯ, ಪಂಚಾಯತ್ ರಾಜ್ ,ಆಹಾರ ಹಾಗೂ ಸರ್ವೆ ಇಲಾಖೆ ಹಾಗೂ ಇತರ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ನೀಡಿ ಪರಿಹಾರ ಪಡೆಯಲು ಅವಕಾಶವಿರುತ್ತದೆ.
ಅಲ್ಲದೆ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಳ್ಳಬಹುದು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಹಸೀಲ್ದಾರರ ಪ್ರಕಟಣೆ ತಿಳಿಸಿದೆ.

