ಕಾರ್ಕಳ: ಕಾರ್ಕಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಾಳೆ ಡಿ. 3ರಂದು ಕುಕ್ಕುಂದೂರು ಗ್ರಾಮದ ಗಣಿತ ನಗರದ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿದೆ.
ಖ್ಯಾತ ಸಾಹಿತಿ ಸೂಡ ಸದಾನಂದ ಶೆಣೈಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಸುಧಾಕರ ಶೆಟ್ಟಿ ರಾಷ್ಟçಧ್ವಜಾರೋಹಣ ನೆರವೇರಿಸಲಿದ್ದಾರೆ ಕಸಪಾ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.
ಅವರು ಈ ಕುರಿತು ಪ್ರತಿಕಾಗೋಷ್ಟಿ ನಡೆಸಿ ಮಾತನಾಡಿದರು.
ಧ್ವಜಾರಹಣದ ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಹಿರಿಯ ಉದ್ಯಮಿ ಬೋಳ ಪ್ರಭಾಕರ ಕಾಮತ್ ಉದ್ಘಾಟಿಸಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ವಿ.ಸುನಿಲ್ ಕುಮಾರ್ ನೆರವೇರಿಸಲಿದ್ದಾರೆ. ಸೂಡ ಸದಾನಂದ ಶೆಣೈ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರ್ ನರಸಪ್ಪ, ಉದ್ಯಮಿ ಸುಜಯ ಕುಮಾರ್ ಶೆಟ್ಟಿ, ಸಾಹಿತ್ಯ ಸಂಘದ ಅಧ್ಯಕ್ಷ ಕೆ.ಪಿ ಶೆಣೈ,ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿರಲಿದ್ದಾರೆ ಎಂದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಗೋಷ್ಟಿಗಳು ನಡೆಯಲಿದ್ದು, ಹಿರಿಯ ಸಾಹಿತಿ ಡಾ.ಪ್ರದೀಪ್ ಕುಮಾರ್ ಹೆಬ್ರಿಯವರಿಂದ ದಿಕ್ಸೂಚಿ ಉಪನ್ಯಾಸ ಹಾಗೂ ಅವರ 511ನೇ ಕೃತಿಯಾದ ಶರಣ ಶ್ರೇಷ್ಟರು ಭಾಗ-2ರ ಲೋಕಾರ್ಪಣೆ ನಡೆಯಲಿದೆ.
ಸಂಜೆ 3.30ರಿಂದ ಸಮಾರೋಪ ಸಮಾರಂಭ ಜರಗಲಿದ್ದು, ನಿವೃತ್ತ ಉಪನ್ಯಾಸಕ ಎಸ್ ರಾಮ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕಸಪಾ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ,ಉದ್ಯಮಿ ಮುನಿಯಾಲು ಉದಯ ಶೆಟ್ಟ, ಡಿ.ಆರ್ ರಾಜು ಮುಂತಾದವರು ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಲಾಗುವುದೆಂದು ಕಸಪಾ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.
ಈ ಸಂದರ್ಭದಲ್ಲಿ ಅರುಣ್ ಕುಮಾರ್ ಮುಂಡ್ಕೂರು, ಲಕ್ಷಿö್ಮÃ ಹೆಗ್ಡೆ, ಸುಧಾಕರ ಪೊಸ್ರಾಲು ಉಪಸ್ಥಿತರಿದ್ದರು