Share this news

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ  ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಈ  ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ  ನಾಳೆ (ಏಪ್ರಿಲ್ 21) ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ  ನಾಳೆ (ಏಪ್ರಿಲ್ 21) ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *