ಕಾರ್ಕಳ: ನಾಳೆಯಿಂದ 22ರವರೆಗೆ ಆನೆಕೆರೆ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆ ನಾಳೆ ಸಮಯ 3ಗಂಟೆಗೆ ಬಾಹುಬಲಿ ಪ್ರವಚನ ಮಂದಿರದ ಭೈರವರಸ ವೇದಿಕೆಯಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್’ಚಂದ್ ಗೆಹ್ಲೋಟ್ ಪಂಚಕಲ್ಯಾಣ ಮಹೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು
ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಡಿ. ಸುಧಾಕರ್, ಸಮಿತಿಯ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ಎಂ ಕೆ ವಿಜಯ ಕುಮಾರ್ ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು,ಈ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸುವಂತೆ
ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಹೆಗ್ಡೆ ತಿಳಿಸಿದ್ದಾರೆ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ