ಕಾರ್ಕಳ : ಮೂಡಬಿದ್ರೆ ತಾಲೂಕು ಮಿಜಾರು ನಿವಾಸಿ ಹರೀಶ್ ಎಂಬವರ ಸೋದರಮಾವ ಸುಧಾಕರ ಸುವರ್ಣ ಎಂಬವರು ಆಗಸ್ಟ್ 26ರಂದು ಸಂಜೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪದವು ಎಂಬಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಏಕಾಏಕಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು.
ಪರಿಣಾಮ ಸುಧಾಕರ ಅವರ ತಲೆಗೆ ಗಂಭೀರವಾದ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿನ್ನೆ (ಸೆ. 1) ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ