ಕಾರ್ಕಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ,ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ, ಗ್ರಾಮ ಪಂಚಾಯಿತಿ ನಿಟ್ಟೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 15ರಂದು ಭಾನುವಾರ ಬೆಳಗ್ಗೆ 9.30ರಿಂದ ಅತ್ತೂರು ಸಂತ ಲಾರೆನ್ಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ