ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ಹಾಸ್ಟೆಲ್ ರೂಮ್ ನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕುಂದಾಪುರ ತಾಲೂಕಿನ ಶಿರೂರಿನ ಸೀಮಾ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಆಕೆ ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ಹಾಸ್ಟೆಲ್ ನಲ್ಲಿದ್ದುಕೊಂಡು ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.
ನರದ ಸಮಸ್ಯೆ ಹಾಗೂ ಚರ್ಮದ ಕಾಯಿಲೆಯಿಂದ ಬಳಲುತ್ತಿದ್ದ ಸೀಮಾ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗಿರಲಿಲ್ಲ. ತನ್ನ ಅನಾರೋಗ್ಯದ ಕಾರಣಕ್ಕೆ ಬೇಸತ್ತಿದ್ದ ಸೀಮಾ ಕಳೆದ 4-5 ತಿಂಗಳ ಹಿಂದೆ ನಿದ್ದೆ ಮಾತ್ರೆ ಹಾಗೂ ತನ್ನ ಆರೋಗ್ಯದ ಸಮಸ್ಯೆಗೆ ವೈದ್ಯರು ನೀಡಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈಗ ಮತ್ತೆ ಮಾರ್ಚ್ 2ರಂದು ಮಧ್ಯಾಹ್ನ ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಹಾಸ್ಟೆಲ್ ಕೋಣೆಯಲ್ಲಿ ಫ್ಯಾನ್ ಗೆ ಚೂಡಿದಾರ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.