ನೆಲ್ಯಾಡಿ: ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಆರ್. ಟಿ. ನಗರ ನಿವಾಸಿಗಳು ಕಾರಿನಲ್ಲಿ ಬೆಂಗಳೂರಿನಿAದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ 6 ಮಂದಿಯ ಪೈಕಿ ನಾಲ್ವರು ಮಹಿಳೆಯರು ಹಾಗೂ ಓರ್ವ ಪುರುಷ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಎರಡು ವರ್ಷದ ಮಗು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ.
ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

