ಬೆಂಗಳೂರು: ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ತರಲಾಗಿದೆ. ಏಪ್ರಿಲ್‌ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದ್ದು, 251 ನೋಂದಣಿ ಕಚೇರಿಗಳಲ್ಲಿ ಇಂದು (ಜೂ.19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ದಾಖಲೆಗಳನ್ನು ಕಾವೇರಿ-2ನಲ್ಲೇ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಆನ್‌ಲೈನ್‌ನಲ್ಲೇ ದಾಖಲೆ ಪರಿಶೀಲಿಸ್ತಾರೆ. ನೋಂದಣಿ ಶುಲ್ಕವನ್ನೂ ಆನ್‌ಲೈನ್‌ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ರಾಜ್ಯ ಸರ್ಕಾರಕ್ಕೂ ಕೂಡ ರಿಜಿಸ್ಟ್ರೇಷನ್ ಬಗ್ಗೆ ಮಾಹಿತಿ ಸಿಗಲಿದೆ. ಅಲ್ಲದೇ ಜಮೀನು ಅಕ್ರಮಗಳನ್ನು ಕೂಡ ತಡೆಯಬಹುದು ಎಂದರು.
ಇದರಿAದ ಯಾರದ್ದೋ ಜಮೀನನ್ನು ಇನ್ಯಾರಿಗೋ ನೋಂದಣಿ ಮಾಡಲು ಆಗಲ್ಲ. ಆಡಳಿತ ಸುಧಾರಣೆ ಆಗಬೇಕು, ಜನರಿಗೆ ಸರ್ಕಾರದ ಜೊತೆಗೆ ಸಂಪರ್ಕ ಇದ್ದಾಗ ವಿಳಂಬ ಇಲ್ಲದೆ ಕೆಲಸ ಆಗಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಜನರು ಹಾಗೂ ಸರ್ಕಾರದ ನಡುವೆ ರಿಜಿಸ್ಟ್ರೇಷನ್ ಅತ್ಯಂತ ಪ್ರಮುಖ ಭಾಗ. ನೊಂದಣಿ ಇಲಾಖೆಯಲ್ಲಿ ಬಹಳ ಅಸ್ತವ್ಯಸ್ತತೆ ಇದೆ. ರಿಜಿಸ್ಟ್ರೇಷನ್ ಸಂದರ್ಭದಲ್ಲಿ ಬಹಳಷ್ಟು ವಿಳಂಬ ಆಗುತ್ತಿದೆ. ಜನರು ಅವರ ಆಸ್ತಿ ಅವರು ಮಾರಾಟ ಮಾಡುವುದಕ್ಕೆ ತುಂಬಾ ಕಷ್ಟಪಡುತ್ತಿದ್ದಾರೆ. ಬಹಳ ವರ್ಷಗಳ ಸುಧಾರಣೆಯಿಂದ ಇದನ್ನು ಬಗೆಹರಿಸಲು ಕಾವೇರಿ-2 ಎಂಬ ಪದ್ದತಿ ತರಲಾಗಿದೆ. ಕಾವೇರಿ-2 ವ್ಯವಸ್ಥೆ ಬಗ್ಗೆ ಅನುಕೂಲ-ಅನಾನುಕೂಲ ಎರಡೂ ಆಗುತ್ತಿದೆ ಎಂಬ ಮಾಹಿತಿ ಇದೆ ಎಂದರು.
ನೋAದಣಿ ಪ್ರಕ್ರಿಯೆಯಿಂದ 2022 ಮೇ 1024 ಕೋಟಿ ರೂ. ಆದಾಯ ಬಂದಿತ್ತು. 2023 ರ ಮೇ ನಲ್ಲಿ 1357 ಕೋಟಿ ರೂ. ಆದಾಯ ಬಂದಿದೆ. ಕಳೆದ ಜೂನ್ ತಿಂಗಳಲ್ಲಿ 721 ಕೋಟಿ ರೂ. ಆದಾಯ ಬಂದಿತ್ತು. ಈ ಜೂನ್ ತಿಂಗಳಲ್ಲಿ 840 ಕೋಟಿ ರೂ. ಆದಾಯ ಬಂದಿದೆ. ಗೈಡೆನ್ಸ್ ವ್ಯಾಲ್ಯೂ 2018 ರಿಂದ ಇದುವರೆಗೆ ರಿವೈಸ್ ಆಗಿಲ್ಲ. ಇದರಿಂದ ರೈತರಿಗೂ ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಗೈಡೆನ್ಸ್ ವ್ಯಾಲ್ಯೂ ರಿವಿಷನ್ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮಾರ್ಕೆಟ್ ವ್ಯಾಲ್ಯೂಗೆ ತಕ್ಕಂತೆ ಗೈಡೆನ್ಸ್ ವ್ಯಾಲ್ಯೂ ಬದಲಾವಣೆ ಮಾಡುತ್ತೇವೆ. ಒಂದೇ ಸಲ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.