Share this news

ಬೆಂಗಳೂರು: ಅರಮನೆ ಮೈದಾನದಲ್ಲಿ ನ.25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳ ಉತ್ಸವವು ಬಹಳ ಅದ್ದೂರಿಯಾಗಿ ನಡೆಯಲಿದ್ದು, ಈ ಕಂಬಳಕ್ಕೆ ಸುದೀಪ್, ಶಿವರಾಜ್ ಕುಮಾರ್ ಸೇರಿದಂತೆ ಇಡೀ ಚಿತ್ರರಂಗದ ಕಲಾವಿದರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ ಸುಮಾರು 200 ಜೊತೆ ಕೋಣಗಳು ಭಾಗವಹಿಸಲಿದ್ದು, ಅಂದಾಜು 2ರಿಂದ 3 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರಾವಳಿಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಹುಲಿ ವೇಷದ ನೃತ್ಯ, ಸಂಸ್ಕೃತಿ, ಕಲೆಗಳ ಪ್ರದರ್ಶನ, ಚಿತ್ರ ಮತ್ತು ಗೊಂಬೆ ಪ್ರದರ್ಶನ, ಇರಲಿದೆ. ಕರಾವಳಿಯ ವಿಶೇಷ ತಿಂಡಿ-ತಿನಿಸುಗಳ 80 ಸ್ಟಾಲ್‌ಗಳು ಇರಲಿವೆ.

ಪ್ರಥಮ ಬೆಂಗಳೂರು ಕಂಬಳ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕಂಬಳ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಬೆಂಗಳೂರು ಕಂಬಳವನ್ನು ಅತ್ಯಂತ ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಉಪ್ಪಿನಂಗಡಿಯಿAದ ಕೋಣಗಳು ಹೊರಡುತ್ತವೆ. ಮಾರ್ಗ ಮಧ್ಯೆ ಹಾಸನದಲ್ಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೋಣಗಳು, ಮಾಲೀಕರಿಗೆ ಊಟ, ಊಪಹಾರ ವಿಶ್ರಾಂತಿ ವ್ಯವಸ್ಥೆ ಮಾಡಿದ್ದಾರೆ. ಅಲ್ಲಿಂದ ಮೆರವಣಿಗೆಯಲ್ಲಿ ಕೋಣಗಳನ್ನು ಕರೆತರಲಾಗುತ್ತದೆ. ಪಕ್ಷಾತೀತವಾಗಿ ಕಂಬಳ ಆಯೋಜನೆಯಾಗಿದ್ದು, ಕರಾವಳಿ ಭಾಗದ ಸುಮಾರು 69 ಸಂಘಟನೆಗಳಿAದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸುಮಾರು 18 ಲಕ್ಷ ಜನರ ಸಂಕಲ್ಪವಾಗಿದೆ ಎಂದರು.

ಸುಮಾರು 700 ವರ್ಷಗಳ ಇತಿಹಾಸ ಇರುವ ಕಂಬಳವನ್ನು ಇಡೀ ದೇಶಕ್ಕೆ ಪರಿಚಯಿಸಲು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಅರಮನೆ ಮೈದಾನದಲ್ಲಿ ಸಿದ್ಧಪಡಿಸಲಾಗಿರುವ 150 ಮೀಟರ್ ಉದ್ದದ ಕರೆ (ಟ್ರ‍್ಯಾಕ್) ಅತ್ಯುತ್ತಮ ಕರೆ ಎಂಬ ಪ್ರಮಾಣಪತ್ರ ಪಡೆದಿದೆ. 600 ಜನ ಕುಳಿತುಕೊಂಡು ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮಕ್ಕೆ ಆರೇಳು ಕೋಟಿ ರೂ. ಖರ್ಚಾಗುತ್ತಿದೆ. ಸರ್ಕಾರದಿಂದ 1 ಕೋಟಿ ರೂ. ಅನುದಾನದ ಭರವಸೆ ಸಿಕ್ಕಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದರು.
ಇದೇವೇಳೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ನಟರಾದ ಸುದೀಪ್, ಉಪೇಂದ್ರ, ಶಿವರಾಜ್‌ಕುಮಾರ್, ಅನುಷ್ಕಾ ಶೆಟ್ಟಿ, ದಿ. ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಸಿನಿಮಾ ರಂಗದ ಅನೇಕರು ಕಂಬಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು

ಕAಬಳದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲಾಗಿದೆ ಮಾತ್ರವಲ್ಲದೇ ಸ್ಪರ್ಧೆ ನಡೆಯುವ ಕರೆಗೆ ರಾಜ ಮಹಾರಾಜ ಕರೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಮತ್ತೊಂದು ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲಾಗಿದೆ.
ಕಂಬಳದಲ್ಲಿ ಗೆದ್ದ ಕೋಣಗಳ ಮಾಲಕರಿಗೆ ಪ್ರಥಮ ಬಹುಮಾನವಾಗಿ 1 ಲಕ್ಷ ರೂ. ಮತ್ತು 16 ಗ್ರಾಂ ಚಿನ್ನ, ದ್ವಿತೀಯ ಬಹುಮಾನವಾಗಿ 50,000 ರೂ. ಮತ್ತು 8 ಗ್ರಾಂ ಚಿನ್ನ ಹಾಗೂ ತೃತೀಂiÀi ಬಹುಮಾನವಾಗಿ 25,000 ರೂ. ಮತ್ತು 4 ಗ್ರಾಂ ಚಿನ್ನ ನೀಡಿ ಗೌರವಿಸಲಾಗುತ್ತದೆ

 

Leave a Reply

Your email address will not be published. Required fields are marked *