ಬೆಂಗಳೂರು : ಪಂಚಮಸಾಲಿಗೆ 2ಎ ಮೀಸಲಾತಿ ನೀಡದಂತೆ ಹೈಕೋರ್ಟ್ ಗೆ ಪಿಐಎಲ್( PIL) ಸಲ್ಲಿಕೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಹಾಗೂ ಅರ್ಜಿದಾರರಿಗೆ ಮಹತ್ವದ ಸೂಚನೆ ನೀಡಿದೆ.
ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ ಸರ್ಕಾರ ಹಾಗೂ ಅರ್ಜಿದಾರರಿಗೆ ಮಹತ್ವದ ಸೂಚನೆ ನೀಡಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿಯ ಪ್ರತಿಯನ್ನು ಅರ್ಜಿದಾರರಿಗೆ ಒದಗಿಸಲು ಕೋರ್ಟ್ ಸೂಚನೆ ನೀಡಿದ್ದು, . ಪ್ರತಿ ಸಿಕ್ಕ 2 ವಾರದಲ್ಲಿ ಪಿಐಎಲ್ನಲ್ಲಿ ಸೂಕ್ತ ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಹೇಳಿದ್ದು, ಈ ಬಳಿಕ 2 ವಾರಗಳಲ್ಲಿ ಸರ್ಕಾರ ಸಹ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕೇಂದು ಪಂಚಮಸಾಲಿ ಸಮುದಾಯದ ಮಠಾಧೀಶರು, ನಾಯಕರು ಬೀದಿಗಳಿದು ಹೋರಾಟ ನಡೆಸಿದ್ದರು. ಈ ಹಿನ್ನೆಲೆ ಪಂಚಮಸಾಲಿಗೆ 2 ಎ ಮೀಸಲಾತಿ ನೀಡದಂತೆ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು.