ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮ ಸಾಲಿ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು. ಸಮುದಾಯದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಐವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
ಪಕ್ಷದ ನಾಯಕರಿಗೂ ದೂರವಾಣಿ ಮೂಲಕ ಮನವಿ ಮಾಡಿದ್ದೇವೆ. ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದೇವೆ. ಇಲ್ಲವಾದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.