ಕಿನ್ನಿಗೋಳಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಇದರ ಸಹಯೋಗದಲ್ಲಿ ಪಡು ಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24 ಸರಕಾರಿ ಹಿರಿಯ ಪ್ರಾಥಮಿಕ ಪಂಜ ಶಾಲಾ ವಠಾರದಲ್ಲಿ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಣ ಸಂಯೋಜಕರಾದ ಪ್ರಮೀಳಾ, ರವಿ ಕಲಾ ಬಿ ಐ ಆರ್ ಟಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪಂಜ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಎಂ ಶೆಟ್ಟಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಸಾಲ್ಯಾನ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜಯರಾಮ್, ಪಡು ಪಣಂಬೂರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಖಾರ್ವಿ , ಶಾಲಾ ಮುಖ್ಯ ಶಿಕ್ಷಕಿ ಐರಿನ್ ಡಿಸೋಜ, ವಿದ್ಯಾರ್ಥಿ ನಾಯಕಿ ಪ್ರತೀತಿ ಮುಂತಾದವರು ಉಪಸ್ಥಿತರಿದ್ದರು.
ಪಡು ಪಣಂಬೂರು ಕ್ಲಸ್ಟರ್ ವ್ಯಾಪ್ತಿಯ 13 ಶಾಲಾ ವಿಭಾಗದ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಶಾಲಾ ಮುಖ್ಯ ಶಿಕ್ಷಕಿ ಐರಿನ್ ಡಿಸೋಜಾ ಸ್ವಾಗತಿಸಿ, ಸಹ ಶಿಕ್ಷಕಿ ಸುನಿತಾ ಮಾರೈಟ್ ಡಿಸೋಜಾ ವಂದಿಸಿದರು. ಸಹ ಶಿಕ್ಷಕಿ ವಸಂತಿ ಕೆ ಕಾರ್ಯಕ್ರಮ ನಿರೂಪಿಸಿದರು.